ರಾಜ್ಯ

ಕೇಂದ್ರ ಸರಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ನೀಟ್-ಯುಜಿ’2026 ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ

 

Leave a Reply

Your email address will not be published. Required fields are marked *

error: Content is protected !!