ಕರಾವಳಿ

ಕಬಕ: ಮಿತ್ತೂರು ಬಳಿ ಭೀಕರ ಅಪಘಾತ, ಸ್ಕೂಟರ್ ಸವಾರ ಮೃತ್ಯು

ಪುತ್ತೂರು: ಪುತ್ತೂರು-ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಕಬಕದಲ್ಲಿ ವಾಸವಾಗಿದ್ದ ಸಲೀಂ (52) ಮೃತಪಟ್ಟವರು. ಅವರು ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

 



ಸಲೀಂ ಅವರು ಮಿತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಬಕ ಕಡೆಯಿಂದ ಮಿತ್ತೂರು ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಸಲೀಂ ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಡಿಕ್ಕಿ ಹೊಡೆದಿತ್ತು.

Leave a Reply

Your email address will not be published. Required fields are marked *

error: Content is protected !!