ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಸೋಮವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ 12ಕ್ಕೇ ಏರಿದೆ.

ಬಜಾಲ್ ಶಾಂತಿನಗರ, ಸಿರಿಸೀಮೆ ನರ್ಸರಿ ಸಮೀಪದ ನಿವಾಸಿ ಮುಹಮ್ಮದ್ ಇಬ್ರಾಹೀಂ ಸಿನಾನ್ ಯಾನೆ ಚಿನ್ನು (21) ಬಂಧಿತ ಆರೋಪಿ.
ಈತ 2026ರ ಫೆಬ್ರವರಿಯಲ್ಲಿ ಆರಿಫ್ ಹುಸೈನ್ರನ್ನು ಕೊಲೆ ನಡೆಸಲು ಸಂಚು ರೂಪಿಸಿದ್ದ ವೇಳೆ ಹಾಜರಿದ್ದ ಮಾ.27ರಂದು ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ಈತ ಮೃತ ರೌಡಿಶೀಟರ್ ‘ಟೊಪ್ಪಿ ನೌಫಾಲ್’ನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ.
ಈತನ ವಿರುದ್ಧ 2025ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ ಹಾಗೂ 2024ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ವಿರುದ್ಧ ‘ಕೋಕಾ ಕಾಯ್ದೆ’ ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಕಮಿಷನ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.




