ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು
ಇರಾನ್ ಜತೆಗಿನ ಯುದ್ಧ ನಿಲ್ಲಿಸುವ ಮಾತುಕತೆ ನಡೆಯುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಬೆನ್ನಲ್ಲೇ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರನ್ನು ಮೇ 25ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲ್ ಪ್ರಧಾನಮಂತ್ರಿ ಕಚೇರಿ ಅಧಿಕೃತವಾಗಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಊಹಾಪೋಹದ ನಡುವೆ ಈ ಪ್ರಕಟನೆ ನೀಡಿರುವುದಾಗಿ ತಿಳಿಸಿದೆ.
ನೆತನ್ಯಾಹು ಅವರನ್ನು ಹಡಸ್ಸಾ ಐನ್ ಕೆರೆಮ್ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು ಅವರು ದಂತ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.





