ರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿಕೆಶಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಿರುಸು ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಇಡೀ ರಾಜ್ಯದ ಗಮನ ಸೆಳೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ‘ಉಪಾಹಾರ ಕೂಟ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ.

ಅಧಿಕಾರ ಹಂಚಿಕೆಯ ಬಿಕ್ಕಟ್ಟಿನ ನಡುವೆಯೂ ಉಭಯ ನಾಯಕರು ಒಗ್ಗಟ್ಟಿನಲ್ಲೇ ಇದ್ದಾರೆ ಎಂಬ ಸಂದೇಶವನ್ನು ರವಾನಿಸುವ ಪ್ರಯತ್ನ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಉಪಾಹಾರ ಕೂಟದಲ್ಲಿ ಭಾಗವಹಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಮೂಲಕ ಇಬ್ಬರು ನಾಯಕರು ಒಟ್ಟಿಗೆ ಇರುವ ಆತ್ಮೀಯ ಚಿತ್ರಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ

 

Leave a Reply

Your email address will not be published. Required fields are marked *

error: Content is protected !!