ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶನಿವಾರ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿದೆ.

ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಅದನ್ನು ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಅನುಮೋದಿಸಿದರು. ನಂತರ ಎಲ್ಲಾ ಶಾಸಕರು ಅದಕ್ಕೆ ಒಪ್ಪಿಗೆ ನೀಡಿದರು.






