ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಲಿರುವ ಯು.ಟಿ.ಖಾದರ್ ಅವರು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.
ಲೋಕಭವನಕ್ಕೆ ತೆರಳಿ ಗವರ್ನರ್ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಡಿಕೆಶಿ ಸರ್ಕಾರದಲ್ಲಿ ಖಾದರ್ ಅವರಿಗೆ ಆರೋಗ್ಯ ಸಚಿವ ಖಾತೆ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.






