ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಜೋರಾದ ಹರ್ಷೋದ್ಗಾರಗಳ ನಡುವೆ ಡಿಕೆ ಶಿವಕುಮಾರ್ ಅವರು ಸಂಜೆ 4.15ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.






