ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಬೆಂಗಳೂರು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನನಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಸ್ವತಃ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದರು. ಆದರೆ, ಅವರು ಕೊಟ್ಟ ಮಾತು ಉಖಿಸಿಕೊಳ್ಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ರಾಮಲಿಂಗ ರೆಡ್ಡಿ ಅವರು ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ನನ್ನಿಂದ ಸಾಧ್ಯವಿಲ್ಲ. ಆ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದೇನೆ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ.






