ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ
ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ.

ಅಣ್ಣಾಮಲೈ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವೊಲಿಸಲು ಬಿಜೆಪಿ ಪಕ್ಷದ ಹಿರಿಯ ಮುಖಂಡರು ಪ್ರಯತ್ನಿಸಿದ್ದರು. ಆದರೆ, ಮನವೊಲಿಕೆ ಪ್ರಯತ್ನಗಳ ನಡುವೆಯೂ ಅಣ್ಣಾಮಲೈ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಅಂತಿಮವಾಗಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.






