ಬೆಳ್ತಂಗಡಿ: ಹಾಸ್ಟೆಲ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ಇಲ್ಲಿನ ಖಾಸಗಿ ಕಾಲೇಜೊಂದರ ಹಾಸ್ಟೆಲ್ ಕೊಠಡಿಯಲ್ಲಿ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂನ್ 4 ರಂದು ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯು ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಜೂನ್ 4 ರಂದು ಮಧ್ಯಾಹ್ನದ ವೇಳೆ ಆಕೆ ತಂಗಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೋಷಕರು ಮಗಳ ಮೃತದೇಹವನ್ನು ಕಂಡು ಕಣ್ಣೀರಿಟ್ಟಿದ್ದಾರೆ.
ಮಗಳ ಸಾವಿನ ಕುರಿತು ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಷಕರು ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸರು ಯು.ಡಿ.ಆರ್ ನಂ: 33/2026, ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಯ ಕಲಂ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






