ಜಿಲ್ಲೆ

ಹಾಸ್ಯ ನಟ ಸಲೀಂ ಕುಮಾರ್ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸಲೀಂ ಕುಮಾರ್ ಅವರು ಮೇ.6ರಂದು ರಾತ್ರಿ ನಿಧನರಾಗಿದ್ದಾರೆ. 56 ವರ್ಷದ ನಟ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


ಸಲೀಂ ಕುಮಾರ್ ಅವರ ನಿಧನದ ಸುದ್ದಿ ಹೊರಬಿದ್ದ ತಕ್ಷಣ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರರಂಗದ ಹಾಸ್ಯ ಮತ್ತು ಭಾವನಾತ್ಮಕ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದ ಅವರು, ದಕ್ಷಿಣ ಭಾರತದ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!