ಕರಾವಳಿಕ್ರೈಂ

ಬೆಳ್ತಂಗಡಿ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣ: ಇಬ್ಬರು ಅಂತರಾಜ್ಯ ಕಳ್ಳರ ಬಂಧನ



ದಿನಾಂಕ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ಎ.5ರಂದು ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಲಾಗಿ ಮೇ.15ರಂದು ಆರೋಪಿ ಬಂಟ್ವಾಳ ಕೊಳ್ನಾಡು ನಿವಾಸಿ ಹಮೀದ್ ( ಹಾಲಿ ವಾಸ: ಕಾಸರಗೋಡು) ಎಂಬಾತನನ್ನು ವಶಕ್ಕೆ ಪಡೆದ ತನಿಖಾ ತಂಡ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸದ್ರಿ ಆರೋಪಿಯ ವಿಚಾರಣೆಯ ವೇಳೆ ನೀಡಿದ ಮಾಹಿತಿಯ ಅಧಾರದಲ್ಲಿ ಜೂ.7ರಂದು ಮತ್ತೋರ್ವ ಆರೋಪಿ ಬಂಟ್ವಾಳ ಕೊಳ್ನಾಡು ನಿವಾಸಿ (ಹಾಲಿ ವಾಸ: ಕಾಸರಗೋಡು) ಜಾಬೀರ್ @ಜಾಬೀ (38) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುಂಜಾಲಕಟ್ಟೆ ಠಾಣಾ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ರೂ 2,00,000/- ನಗದು ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣಾ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ ರೂ 23,67,000/- ಗಳಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.


ಸದ್ರಿ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ‌ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು ತನಿಖೆ ಮುಂದುವರಿದಿದೆ.

 


ಈ ಪ್ರಕರಣದ ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗಾಧೀಕ್ಷಕರಾದ ಶ್ರೀಮತಿ ರೋಹಿಸಿ ಸಿ.ಕೆ ರವರ ನೇತೃತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್‌, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್‌ ಹೆಚ್‌.ಇ, ಪುಂಜಾಲಕಟ್ಟೆ ಠಾಣಾ ಪಿ.ಎಸ್‌.ಐ ರಾಜೇಶ್‌ ಕೆ.ವಿ, ಸಿಬ್ಬಂದಿಗಳಾದ ಏ.ಎಸ್‌.ಐ ಬೆನ್ನಿಚ್ಚನ್‌, ಏ.ಎಸ್‌.ಐ ಸುಂದರ ಶೆಟ್ಟಿ, ಏ.ಎಸ್‌.ಐ ವಿಶ್ವನಾಥ್‌ ನಾಯ್ಕ್‌, ಪ್ರವೀಣ್‌ ಮೂರುಗೋಳಿ, ರಾಜೇಶ್‌ ಎನ್‌, ವಿಜಯ್‌ ಕುಮಾರ್‌ ರೈ, ರಾಹುಲ್‌ ರಾವ್‌, ಸಂತೋಷ್‌, ಬಸವರಾಜ್‌, ರಜಿತ್‌, ನಾಗರಾಜ್‌ ರವರು ಭಾಗಿಯಾಗಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್‌ ಮತ್ತು ಸಂಪತ್‌ ರವರು ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!