ಕರಾವಳಿಕ್ರೈಂ

ನಿಷೇದಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ

ಮಂಗಳೂರು: ಜೂ.8ರಂದು ಮಂಗಳೂರು ನಗರದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ ಶೆಡ್ಡೆ ಪರಿಸರದಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾಹಿತಿ ಸಂಗ್ರಹಿಸಿ ದಾಳಿ ಮಾಡಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡು, ಆರೋಪಿಗಳಾದ ಜನನ್ ಜಗನ್ನಾಥ್ ಮತ್ತು ಪರೀಕ್ಷಿತ್ ಎಂಬುವರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪ್ರಕರಣದಲ್ಲಿ ಕೂಲಂಕುಷವಾಗಿ ತನಿಖೆ ಮಾಡುವ ಸಲುವಾಗಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!