ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಮೂವರು ವಶಕ್ಕೆ
ವಿಟ್ಲ: ಜೂ.14ರಂದು ಸಂಜೆ, ಬಂಟ್ವಾಳ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣರವರಿಗೆ ಮಾಹಿತಿ ಬಂದ ಮೇರೆಗೆ, ಠಾಣಾ ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿರುತ್ತಾರೆ.

ಸದ್ರಿ ಸ್ಥಳದಲ್ಲಿ ಪರಿಶೀಲಿಸಿದಾಗ ಹಣವನ್ನು ಪಣವಾಗಿಟ್ಟು ಕೋಳಿಅಂಕ ಜೂಜಾಟ ನಡೆಯುತ್ತಿರುವುದು ಕಂಡುಬಂದಿದ್ದು, ದಾಳಿ ನಡೆಸಲಾಗಿ ಉಳ್ಳಾಲ ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಬಂಟ್ವಾಳ ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ (63) ಹಾಗೂ ಬಂಟ್ವಾಳ ವಿಟ್ಲಪಡ್ನೂರು ನಿವಾಸಿ ದಯಾನಂದ (40) ಎಂಬವರುಗಳನ್ನು ವಶಕ್ಕೆ ಪಡೆದು ಜೂಜಾಟಕ್ಕೆ ಬಳಸಿದ ರೂ 1550/- ನಗದು, ಅಂಕದ ಕೋಳಿಗಳು-3 ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




