ಉಪ್ಪಿನಂಗಡಿ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ:
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392,216(A)IPC ಮತ್ತು 196,115r/w 190(2) IMV ACT ಅಡಿಯಲ್ಲಿ ತಲಾ 10000 ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆ ವಾದ ಮಂಡಿಸಿದ್ದರು.




