ಪುತ್ತೂರು: ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ
ಪುತ್ತೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾದ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ @ K. M. ಸಲಾಂ @ ಡಾಲರ್ ಸಲಾಂ ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನನ್ನು ವಿಟ್ಲ ಠಾಣಾ ಪೊಲೀಸರು ಜೂ.16ರಂದು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 45/2023, ಕಲಂ: 353, 332, 504 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿರುತ್ತದೆ.





