ರಾಜ್ಯ

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ತೆರಳಿ ನೋಟಿಸ್ ನೀಡಿದ ಪೊಲೀಸರು



ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಅ.15ರಂದು ತಡರಾತ್ರಿ ನಡೆದಿದೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟಿಸ್ ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಡಿ ನೀಡಿ ಹೋರಾಟ ಮುಂದುವರಿಸುವುದಿಲ್ಲ‌ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ಹೇಳಲಾಗಿದೆ ಎಂದು ತಿಳಿದು ಬಂದಿದೆ.

ಹೆದರುವ ಕಾಲ ಮುಗಿದಿದೆ-ಮುನೀರ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ “ಗಂಡಸು” ಪೊಲೀಸರ ದಂಡು !! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ ಬಿಜೆಪಿಗರೆ ಎಚ್ಚರ” ಎಂದು ಹೇಳಿದ್ದಾರೆ.

ಪ್ರತಿಭಾ ಕುಳಾಯಿ ಆಕ್ರೋಶ:
“ಬಿಜೆಪಿ ಎಂಎಲ್ಎ, ಎಂಪಿ ಅವರು ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಂತಿದೆ. ಅ.18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ನಾನೊಬ್ಬ ಸಾಮಾಜಿಕ ಕಾರ್ಯಕರ್ತೆಯೇ ಹೊರತು ಉಗ್ರಗಾಮಿ ಅಲ್ಲ. ನಾನೊಬ್ಬ ಭಾರತ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ಈ ದೇಶದ ಕಾನೂನನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

SDPI ಖಂಡನೆ:
ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಮೇಲೆ ನಡೆದ ದಾಳಿ ಖಂಡನೀಯ. ಜನತೆ ಬಿಜೆಪಿ ಸರ್ಕಾರದ ಸರ್ವಾಧಿಕಾರ ಆಡಳಿತ ಧೋರಣೆ ವಿರುದ್ಧ ಧ್ವನಿ ಎತ್ತಬೇಕಾಗಿದೆ ಎಂದು SDPI ಮುಖಂಡರು ಹೇಳಿದ್ದಾರೆ.
ಸುರತ್ಕಲ್ ಟೋಲ್ ತೆರವುಗೊಳಿಸುವ ಉಗ್ರಹೋರಾಟಕ್ಕೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ಕ್ಷೇತ್ರಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು SDPI ಮುಖಂಡರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!