ಕರಾವಳಿಕ್ರೈಂ

ವಿಟ್ಲ: ಅಂಬರ್‌ಗ್ರೀಸ್ ಮಾರಾಟಕ್ಕೆ ಯತ್ನ; ಇಬ್ಬರ ಬಂಧನ



ವಿಟ್ಲ: ಅಕ್ರಮವಾಗಿ ಅಂಬರ್‌ ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.



ಕರೋಪಾಡಿ ನಿವಾಸಿ ಕುಮುದಾಕ್ಷ(27), ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಬಂಧಿತ ಆರೋಪಿಗಳು.

ಅಂಬರ್‌ಗ್ರೀಸ್‌ನ್ನು ಮಾರಾಟ ಮಾಡಲು ಸ್ಕೂಟರ್‌ನಲ್ಲಿ ಸಾಗಿ ಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಎಸೈ ರಾಮಕೃಷ್ಣ ಸಿಬ್ಬಂದಿಯೊಂದಿಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಬೊಳಂತಿಮೊಗರು ಎಂಬಲ್ಲಿಗೆ ತೆರಳಿ, ಸಿಬ್ಬಂದಿಯ ಸಹಾಯದಿಂದ ಸ್ಕೂಟರನ್ನು ತಡೆದು ನಿಲ್ಲಿಸಿ ವಿಚಾರಿಸಿದರು. ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಿ ಸುತ್ತಿದ್ದ ಸುಮಾರು 5.73 ಗ್ರಾಂ ತೂಕದ ವಸ್ತುವನ್ನು ಹಾಜರುಪಡಿಸಿ, ಇದು ಅಂಬರ್ ಗ್ರೀಸ್ ಎಂಬುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 



ಆರೋಪಿಗಳ ಬಳಿಯಿದ್ದ 2 ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!