ವಿಟ್ಲ : ಕಾರು-ಸ್ಕೂಟರ್ ಅಪಘಾತ- ಸವಾರ ಗಂಭೀರ
ವಿಟ್ಲ: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಜೂ.28ರಂದು ನಡೆದಿದೆ.

ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಚರಂಡಿಗೆ ಇಳಿದು ನಿಂತಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಸವಾರನಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಧಾವಿಸಿ, ಗಾಯಾಳುವನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.





