ಕರಾವಳಿಕ್ರೈಂರಾಜ್ಯ

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ  ಅಕ್ಷೇಪಾರ್ಹ ಕಮೆಂಟ್ ಮಾಡಿದ್ದ ವ್ಯಕ್ತಿಯ ಬಂಧನ

ವಿಟ್ಲ: ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ 18-09-2025ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಆರೋಪಿ ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಎಂಬಾತನನ್ನು ಜೂ.27ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



ಆರೋಪಿ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

error: Content is protected !!