ಕರಾವಳಿಕ್ರೈಂ

ಬೆಳ್ತಂಗಡಿ: ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.1ರಂದು ವರದಿಯಾಗಿದೆ.

ಸಾಂದರ್ಭಿಕ ಚಿತ್ರ



ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!