ಕ್ರೈಂರಾಜ್ಯ

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕೂಲಿ ಕಾರ್ಮಿಕರು ದಾರುಣ ಮೃತ್ಯು

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ದುರಂತ ಸಂಭವಿಸಿದ್ದು, ಸುಮಾರು 40 ಅಡಿ ಮೇಲಿಂದ ಬಂಡೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.



ಹಿಟಾಚಿಯಿಂದ ಕೆಲಸ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ 5 ಜನ ಕೂಲಿ ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕು ಬಂಡೆ ಬಿದ್ದಿದೆ.

 

Leave a Reply

Your email address will not be published. Required fields are marked *

error: Content is protected !!