ಕಡಬ: ಬ್ಯಾಂಕ್ಗೆ ವಂಚಿಸಲು ಯತ್ನ-ಇಬ್ಬರು ಪೊಲೀಸ್ ವಶಕ್ಕೆ
ಕಡಬ: ತೂಕ ಹೆಚ್ಚಿಸಿ ಚಿನ್ನಾಭರಣಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ:
ಜುಲೈ 3 ರಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು ಬ್ಯಾಂಕ್ನಲ್ಲಿ ಅಡವಿಡಲು ಬಂದಿರುವುದಾಗಿ ತಿಳಿಸಿದ್ದಾರೆ. ಆದರೆ ಆಭರಣಗಳ ಬಗ್ಗೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಆಭರಣಗಳು ಹೆಚ್ಚು ತೂಕ ಬರುವಂತೆ ಮಾಡಿ ಬ್ಯಾಂಕ್ಗೆ ಮೋಸ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಬಂಧಿತ ಆರೋಪಿಗಳು.
ಕಡಬ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





