ಅಕ್ರಮ ಕಲ್ಲು ಸಾಗಾಟ: ಲಾರಿ ವಶಕ್ಕೆ
ಸುಳ್ಯ: ಅಕ್ರಮವಾಗಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಸುಳ್ಯ ಕಲ್ಲುಗುಂಡಿ ಹೊರಠಾಣೆ ಪೊಲೀಸರು ವಶಪಡಿಸಿಕೊಂಡು, ಲಾರಿ ಮಾಲಿಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜು.9ರಂದು ಸಂಜೆ ಕಲ್ಲುಗುಂಡಿ ಹೊರಠಾಣೆ ಸಿಬ್ಬಂದಿ ಠಾಣೆಯ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಲಾರಿಯನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದರು. ಈ ವೇಳೆ ಲಾರಿ ಚಾಲಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಪರಿಶೀಲನೆ ನಡೆಸಿದಾಗ ಲಾರಿಯಲ್ಲಿ 600 ಕಲ್ಲುಗಳನ್ನು ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಸಾಗಿಸಲಾಗುತ್ತಿರುವುದು ಪತ್ತೆಯಾಯಿತು. ತಕ್ಷಣವೇ ಪೊಲೀಸರು ಲಾರಿಯನ್ನು ಕಲ್ಲುಗಳ ಸಮೇತ ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಲಾರಿ ಮಾಲಿಕ ಹಾಗೂ ಚಾಲಕನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




