ಕರಾವಳಿಜಿಲ್ಲೆ

ಏನೆಕಲ್ಲು ಬಸ್ ನಿಲ್ದಾಣ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವೃದ್ಧ ಸಾವು



ಕಡಬ: ಏನೆಕಲ್ಲು ಗ್ರಾಮದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ 68 ವರ್ಷದ ವೃದ್ಧರೊಬ್ಬರು ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಜುಲೈ 11ರಂದು ಬೆಳಿಗ್ಗೆ ನಡೆದಿದೆ.

ಸಾಂದರ್ಭಿಕ ಚಿತ್ರ


ಮೃತರನ್ನು ಮುತ್ಲಾಜೆ ನಿವಾಸಿ ಚೆನ್ನಪ್ಪ ಗೌಡ (68) ಎಂದು ಗುರುತಿಸಲಾಗಿದೆ. ಅವರು ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್‌ನ್ನು ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

 



ಅಪಘಾತದ ಪರಿಣಾಮ ಚೆನ್ನಪ್ಪ ಗೌಡ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಸಂಬಂಧಿಕರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.



ಈ ಸಂಬಂಧ ಮನಮೋಹನ (26) ಅವರ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ 106ರಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!