ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸುತ್ತಿದ್ದ ಕುಖ್ಯಾತ ರೌಡಿ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಮ್ರಾನ್ ಸುರ್ಮೋ ಎಂದು ಗುರುತಿಸಲಾಗಿದೆ.

ಆರೋಪಿ ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದೆ, ಪೊಲೀಸರ ಕಣ್ತಪ್ಪಿಸಲು ಬುರ್ಖಾ ಧರಿಸಿ ವಿವಿಧೆಡೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.
ಇಮ್ರಾನ್ ಸುರ್ಮೋ ವಿರುದ್ಧ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಒಟ್ಟು 23 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದ ವಾರಂಟ್‌ಗಳಿದ್ದರೂ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ


