ಕರಾವಳಿಕ್ರೈಂ

ಬಿಸಿ ರೋಡ್: ಬಸ್ ನಿಲ್ದಾಣದಲ್ಲಿ ಹರಿತವಾದ ಆಯುಧದಿಂದ ಯುವತಿಗೆ ಹಲ್ಲೆ, ಗಂಭೀರ ಗಾಯ


ಬಂಟ್ವಾಳ: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಅಪರಿಚಿತ ವ್ಯಕ್ತಿಯೊಬ್ಬ ಯುವತಿಗೆ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ.



ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಜುಲೈ 16ರಂದು ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21ರಿಂದ 25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿ ಏಕಾಏಕಿ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಯುವತಿಯನ್ನು ಸ್ಥಳೀಯರು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

 



ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

error: Content is protected !!