ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ!
ಹೊಸದಿಲ್ಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಮಹಿಳೆಯೊಬ್ಬರು ನೀಲಿ ಶಾಯಿ ಎರಚಿದ ಘಟನೆ ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದಿದೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಮುಂದುವರಿದಿದ.

ಅಭಿಜೀತ್ ದೀಷ್ಟೆ ಅವರ ಮೇಲೆ ಶಾಯಿ ಎರಚಿದ ಬೆನ್ನಲ್ಲೇ ಅವರ ಬೆಂಬಲಿಗರು ವೇದಿಕೆಯತ್ತ ಧಾವಿಸಿ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ವೀಡಿಯೊ ಪೋಸ್ಟ್ ಮಾಡಿರುವ ಅಭಿಜೀತ್ ದೀಷ್ಟೆ ನೀಲಿ ನನ್ನ ಬಣ್ಣ ಜೈ ಭೀಮ್” ಎಂದು ಹೇಳಿದ್ದಾರೆ. ಮಹಿಳೆಯ ಗುರುತು ಹಾಗೂ ಈ ಕೃತ್ಯದ ಹಿಂದಿನ ಉದ್ದೇಶ ತಕ್ಷಣಕ್ಕೆ ತಿಳಿದು ಬಂದಿಲ್ಲ.




