ಕರಾವಳಿಕ್ರೈಂ

ಸಂಪಾಜೆ: ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು, ಮೃತದೇಹ ಮಂಗಳೂರಿಗೆ ರವಾನೆ

ಪುತ್ತೂರು: ಸುಳ್ಯ ತಾಲೂಕಿನ ಸಂಪಾಜೆ ಕಡೆಪಾಲದಲ್ಲಿ ವಿವಾಹಿತ ಮಹಿಳೆಯೋರ್ವರು ಜು.18ರಂದು ರಾತ್ರಿ ಮೃತಪಟ್ಟ ಘಟನೆ ನಡೆದಿದ್ದು ಸಾವಿನ ಬಗ್ಗೆ ಮಹಿಳೆಯ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ದೂರು ನೀಡಿರುವ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿದ ಘಟನೆ ನಡೆದಿದೆ.

ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ ಪುತ್ರ ಅನ್ಸಾರ್ ಎಂಬವರ ಪತ್ನಿ ಫಾತಿಮತ್ ಇಶಾನ ಮೃತಪಟ್ಟ ಮಹಿಳೆ.

ಫಾತಿಮತ್ ಇಶಾನ ಪುತ್ತೂರು ತಾಲೂಕು ಕುಂಬ್ರ ಸಮೀಪದ ಸಾರೆಪುಣಿ ನಿವಾಸಿ ಜುಬೈದಾ ಎಂಬವರ ಪುತ್ರಿ.

ಮೃತದೇಹವನ್ನು ಪ್ರಥಮವಾಗಿ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿತ್ತು, ಬಳಿಕ ಮಂಗಳೂರಿಗೆ ರವಾನೆ ಮಾಡಲಾಗಿದೆ.

ಈ ಕುಟುಂಬವು ಮೊದಲು ದೇವರಕೊಲ್ಲಿಯಲ್ಲಿ ವಾಸಿಸುತ್ತಿದ್ದು ಇದೀಗ ಕೆಲವು ವರ್ಷಗಳಿಂದ ಸಂಪಾಜೆಯಲ್ಲಿ ನೆಲೆಸಿದ್ದಾರೆ ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

error: Content is protected !!