ಕರಾವಳಿಕ್ರೈಂ

ಸುಳ್ಯ: ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ



ಸುಳ್ಯ: ಕೆಲಸಕ್ಕಾಗಿ ಮಂಗಳೂರಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆಯಾಗಿದ್ದು, ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಸಾಂದರ್ಭಿಕ ಚಿತ್ರ



ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ಬಾಲಕಿ ಮನೆಯಿಂದ ಮೇ.7ರಂದು ತೆರಳಿದ ಬಳಿಕ ಮನೆಗೆ ವಾಪಸ್ ಬಾರದೆ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 



ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಜುಲೈ 22ರಂದು ಬಾಲಕಿಯನ್ನು ಪತ್ತೆಹಚ್ಚಿದ್ದಾರೆ. ವಿಚಾರಣೆ ವೇಳೆ ಕಡಬ ನಿವಾಸಿ ಧನುಷ್ (18) ಎಂಬಾತ ತನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ.



ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಪೋಕ್ಸೊ ಕಾಯ್ದೆಯ ಕಲಂ 5(l), 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ಆರೋಪಿಯನ್ನು ಜುಲೈ 22ರಂದು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!