ಕರಾವಳಿಕ್ರೈಂ

ಉಪ್ಪಿನಂಗಡಿ: ಖೋಟಾ ನೋಟು ಪ್ರಕರಣ: ಮತ್ತಷ್ಟು ಶೋಧ ಕಾರ್ಯಾಚರಣೆ, ಪ್ರಕರಣಕ್ಕೆ ಸಂಬಂಧಿಸಿದ ವಸ್ತುಗಳ ವಶ



ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜು.16ರಂದು ದಾಖಲಾಗಿದ್ದ ಖೋಟಾ ನೋಟು ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ಶಕೀಲ್ ಎಂಬಾತನ ವಾಸ್ತವ್ಯದ ಮನೆ ಹಾಗೂ ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿರುವ ಆರೋಪಿ ಸಂದೀಪ್ ವಾಸವಿದ್ದ ಬೆಳ್ತಂಗಡಿ ತಾಲೂಕಿನ ಕುವ್ವೆಟ್ಟು ಗ್ರಾಮದ ವಸತಿ ಕಟ್ಟಡದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.


ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಈ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

 


ಶೋಧನೆಯ ವೇಳೆ ಆರೋಪಿ ಸಂದೀಪ್ ವಾಸವಿದ್ದ ಮನೆಯಿಂದ ಪ್ರಿಂಟರ್, ಸ್ಟೀಲ್ ಸ್ಕೇಲ್, ದ್ರಾವಣದ ಬಾಟಲಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!