ರಾಜಕೀಯರಾಷ್ಟ್ರೀಯ

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಾಹುಲ್ ಗಾಂಧಿ

ಬಳ್ಳಾರಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯುತ್ತಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಕಣದಲ್ಲಿದ್ದಾರೆ.

‘ಭಾರತ್ ಜೋಡೊ ಯಾತ್ರೆ’ ಕೈಗೊಂಡಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಸದ್ಯ ಬಳ್ಳಾರಿಯಲ್ಲಿದ್ದು, ಇಲ್ಲಿನ ಸಂಗನಕಲ್ಲು ಕ್ಯಾಂಪ್‍ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಮತದಾನ ಹಿನ್ನೆಲೆ ಪಾದ ಯಾತ್ರೆ ಮೊಟಕುಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ರಾಹುಲ್‍ ಗಾಂಧಿ ಹಾಗೂ ಅವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗಿರುವ 40 ಮಂದಿ ಸದಸ್ಯರಿಗೆ ವಿಶೇಷ ಮತಗಟ್ಟೆ ಸ್ಥಾಪಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!