ಕರಾವಳಿ

ಸಾರೆಪುಣಿ: ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಫಾತಿಮತ್ ನಿಶಾನ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ


ಪುತ್ತೂರು: ಇತ್ತೀಚೆಗೆ ಪತಿಯ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸಾರೆಪುಣಿಯ ಫಾತಿಮತ್ ನಿಶಾನ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಜು.30ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ತಿಳಿಸಿದರು.

ಬಳಿಕ ಮಾತನಾಡಿದ ಅವರು ಫಾತಿಮತ್ ನಿಶಾನ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪ ಇರುವ ಹಿನ್ನೆಲೆಯಲ್ಲಿ ಇದು ಸರಿಯಾದ ದಿಕ್ಕಿನಲ್ಲಿ ತನಿಖೆ ಆಗಿ ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು, ಇಲ್ಲಿ ಯಾರಿಗೂ ಅನ್ಯಾಯ ಆಗಬಾರದು, ಇದು ಕೊಲೆ ಎಂದು ಸಾಬೀತಾದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದರು.

 

ನಾನು ನಿಮ್ಮೊಂದಿಗಿದ್ದೇನೆ, ನಿಮಗೆ ನ್ಯಾಯ ಸಿಗಬೇಕು, ಇಂತಹ ಘಟನೆ ಇನ್ನು ಮುಂದೆ ಎಲ್ಲಿಯೂ ಸಂಭವಿಸಬಾರದು, ಹಾಗಾಗಿ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮನೋಹರ ರೈ ಎಂಡೆಸಾಗು, ಕಾರ್ಯದರ್ಶಿ ಹಬೀಬ್ ಕಣ್ಣುರು, ಕೆದಂಬಾಡಿ ಗ್ರಾ.ಪಂ ಮಾಜಿ ಸದಸ್ಯ ಮೆಲ್ವಿನ್ ಮೊಂತೆರೋ, ಬೂತ್ ಅಧ್ಯಕ್ಷ ಸದಾಶಿವ ರೈ, ಸಾರೆಪುಣಿ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಸಾರೆಪುಣಿ, ಇಬ್ರಾಹಿಂ ಕುಯ್ಯಾರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!