ಬಿಜೆಪಿ ನಗರ ಮಂಡಲ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಪ್ರಭು ನೇಮಕ
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉದ್ಯಮಿ ಯು.ಆರ್. ಪ್ರಾಪರ್ಟೀಸ್‌ನ ಮಾಲಕ ಹಾಗೂ ಬೆದ್ರಾಳದ ನಾಗ ರಕ್ತೇಶ್ವರಿ ಪ್ರತಿಷ್ಠಾನದ ಸಂಚಾಲಕ ಉಜ್ವಲ್ ಕುಮಾರ್ ಪ್ರಭು ಅವರನ್ನು ನೇಮಕ ಮಾಡಲಾಗಿದೆ.

ಜುಲೈ 31ರಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮಂಡಲ ಬಿಜೆಪಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮಾಜಿ ಅಧ್ಯಕ್ಷ ಎಸ್. ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಪಕ್ಷ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುತ್ತೇನೆ. ಪಕ್ಷದ ಹಿತಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇನೆ ಎಂದು ಉಜ್ವಲ್ ಕುಮಾರ್ ಪ್ರಭು ಹೇಳಿದರು.



