ಕರಾವಳಿಕ್ರೈಂ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಬೆಳ್ತಂಗಡಿ: ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ಮೂಡಬಿದ್ರೆ ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಎಂಬವರ ಪುತ್ರ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಅನ್ವರ್‌ ಅವರು ಬೆಳುವಾಯಿಯಲ್ಲಿ ಕಳೆದ ಕೆಲವು ಸಮಯದಿಂದ ಬಾಡಿಗೆ ಮನೆಯಲ್ಲಿ ಪತ್ನಿ, ಮಗುವಿನೊಂದಿಗೆ ವಾಸವಾಗಿದ್ದರು.

 

ಮೀನಿನ ಟೆಂಪೋದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವ‌ರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು, ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದಾರೆ. ಗುರುವಾರ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಪತ್ನಿ ತನ್ನ ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ.



ಈ ಹಿನ್ನೆಲೆಯಲ್ಲಿ ತನ್ನ ಅಕ್ಕನಿಗೆ ವೀಡಿಯೊ ಕರೆ ಮಾಡಿ, ಪತ್ನಿ ಮನೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆನ್ನಲಾಗಿದೆ. ಆತಂಕಕ್ಕೊಳಗಾದ ಮನೆಯವರು ಬಾಡಿಗೆ ಮನೆ ಬಳಿ ಬಂದಾಗ ಆಗಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!