ನಾಳೆ (ಆ.4) ದ.ಕ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ
ಮಂಗಳೂರು: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಉಳ್ಳಾಳ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆಗಸ್ಟ್ 4ರಂದು (ಮಂಗಳವಾರ) ರಜೆ ಸಾರಲಾಗಿದೆ.

ಅದೇ ರೀತಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಹಾಗೂ ಎಲ್ಲಾ ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.



