ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ರ‍್ಯಾಗಿಂಗ್ ಶಂಕೆ
ಮಂಗಳೂರು: ನಗರದ ಗುಜ್ಜರಕೆರೆ ಬಳಿಯ ಚಾಯ್ ಅಂಗಡಿಯೊಂದರ ಸಮೀಪ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ 4ರಿಂದ 6 ಮಂದಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಎನ್ನಲಾದವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಪ್ರಾಥಮಿಕವಾಗಿ ಇದು ರ‍್ಯಾಗಿಂಗ್‌ಗೆ ಸಂಬಂಧಿಸಿದ ಘಟನೆ ಎಂದು ಶಂಕಿಸಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ.
ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.



