ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದ್ದು
ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ.

ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು ಎನ್ನಲಾಗಿದೆ.
ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿದ್ದು ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ ಮುಂದೆ ಕುಟುಂಬಸ್ಥರು ಕುಳಿತು ಆಕ್ರಂದಿಸುತ್ತಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.





