ಫಿಲೋ ಪ್ರತಿಭಾ ಕಾರ್ಯಕ್ರಮ: ಇಳಂತಿಲ ಜ್ಞಾನಭಾರತಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಉಪ್ಪಿನಂಗಡಿ: ಪುತ್ತೂರಿನ ಸೇಂಟ್ ಫಿಲೋಮಿನಾ ಪಿಯು ಕಾಲೇಜಿನಲ್ಲಿ ನಡೆದ ಫಿಲೋ ಪ್ರತಿಭಾ ಕಾರ್ಯಕ್ರಮದಲ್ಲಿ ಇಳಂತಿಲದ ಜ್ಞಾನಭಾರತಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಸೆಮಿನಾರ್ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಶಾನುಂ ಉತ್ತಮ ಸಾಧನೆ ಮಾಡಿ ಬಹುಮಾನ ಪಡೆದರೆ, ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ರೈಸಾ ಬಹುಮಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಜ್ಞಾನಭಾರತಿ ಶಾಲೆಯ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಪೋಷಕರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


