ಕೆಯ್ಯೂರು: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು
ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ ಅಭಿಲಾಷ್ (24) ಎಂದು ಗುರುತಿಸಲಾಗಿದೆ.
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಬೊಳಿಕ್ಕಳ ನೆಲ್ಲಿಗುರಿ ಬಳಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.


