ಕ್ರೀಡೆಕ್ರೈಂಜಿಲ್ಲೆ

ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕನ ಬಂಧನ



ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಆ.18ರಂದು ಪಂಪ್ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ MDMA ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.



ಆರೋಪಿಯಿಂದ 13.69 ಗ್ರಾಂ MDMA, ₹1.36 ಲಕ್ಷ ಮೌಲ್ಯದ ಮಾದಕ ವಸ್ತು, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂ.2,94,500 ಆಗಿದೆ.

ಬಂಧಿತ ಆರೋಪಿಯನ್ನು ಕೇರಳ ಮಂಜೇಶ್ವರ ಮೂಲದ ಮೊಹಮ್ಮದ್ ಇರ್ಷಾದ್ (30) ಎಂದು ಗುರುತಿಸಲಾಗಿದೆ. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ. 82/2026ರಂತೆ ಎನ್.ಡಿ.ಪಿ.ಎಸ್. ಕಾಯ್ದೆಯ ಕಲಂ 8(c), 22(c) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!