ಬಂಟ್ವಾಳದಲ್ಲಿ ತಲವಾರು ತೋರಿಸಿ 8.52 ಲಕ್ಷ ರೂ ನಗದು ಸುಲಿಗೆ
ಮಂಗಳೂರಿನ ಕಣ್ಣೂರು ಎಂಬಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು, ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಲು ಆ.20ರಂದು ಬೈಕ್‌ನಲ್ಲಿ ತೆರಳಿದ್ದರು.

ವಿವಿಧ ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿಕೊಂಡು ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ, ಮಧ್ಯಾಹ್ನ ಸುಮಾರು 1 ಗಂಟೆಗೆ ಬಂಟ್ವಾಳದ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಅವರನ್ನು ತಲವಾರು ತೋರಿಸಿ ಬೆದರಿಸಿದ್ದಾರೆ.
ನಂತರ ಅವರ ಬಳಿಯಿದ್ದ ₹8,52,000 ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


