ಕರಾವಳಿಕ್ರೈಂ

ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ


ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ, ಕಳವಾದ ಹಣವನ್ನು ವಶಪಡಿಸಿಕೊಂಡಿದ್ದಾರೆ.



ದಿನಾಂಕ 18-08-2026ರ ಮಧ್ಯರಾತ್ರಿ ಆರೋಪಿ ದೇವಸ್ಥಾನದ ಮೇಲ್ಛಾವಣಿಯಲ್ಲಿದ್ದ ಜಾಲರಿಯ ಮೂಲಕ ಒಳಪ್ರವೇಶಿಸಿ, ಸಿಸಿಟಿವಿ ಕ್ಯಾಮೆರಾವನ್ನು ತಿರುಗಿಸಿ, ಕಾಣಿಕೆ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿದ್ದನು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಡಿಕೇರಿ ತಾಲೂಕಿನ ಸಣ್ಣಪುಲಿಕೊಟ್ಟ ಗ್ರಾಮದ ಅಜ್ಜಿಮಡ, ಕುಬೇರಂಗಡಿಯ ರವಿಕುಮಾರ @ ರವಿ ಹೆಚ್.ಜಿ. (20) ಎಂಬಾತನನ್ನು ಬಂಧಿಸಿದ್ದು
ಆರೋಪಿಯಿಂದ 2,195 ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!