ಪುತ್ತೂರು ದರ್ಬೆ ಘಟನೆ ಹಿನ್ನೆಲೆ: ಇಂದು ಸಂಜೆ ಶಾಂತಿ ಸಭೆ
ಪುತ್ತೂರು: ದರ್ಬೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಆ.23(ಇಂದು)ಸಂಜೆ 5 ಗಂಟೆಗೆ ಪುತ್ತೂರು ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬರೂ ಈ ಸಭೆಯಲ್ಲಿ ಭಾಗವಹಿಸಿ ತಮ್ಮ ವಿನಂತಿ ಮತ್ತು ಕಳವಳಗಳನ್ನು ಶಾಂತಿಯುತ ಹಾಗೂ ರಚನಾತ್ಮಕ ರೀತಿಯಲ್ಲಿ ವ್ಯಕ್ತಪಡಿಸಬೇಕೆಂದು ಪೊಲೀಸ್ ಇಲಾಖೆ ವಿನಂತಿಸಿದೆ.


