ದರ್ಬೆ ಪ್ರಕರಣ: ಬಂದ್ ಗೆ ಕರೆ ನೀಡಿದ ಹಿನ್ನೆಲೆ, ಸಂಜೀವ ಮಠಂದೂರು ಫೇಸಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು
ಪುತ್ತೂರು ದರ್ಬೆ ಎಂಬಲ್ಲಿ ಆ.21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ, “Sanjeeva Matandoor” ಎಂಬ ಫೇಸ್ ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕ ವಲಯದಲ್ಲಿ ಭಯವನ್ನುಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡುವ ಮೂಲಕ, ಬಂದ್ ಗೆ ಕರೆಕೊಟ್ಟು, ಜನರು ಅಕ್ರಮಕೂಟ ಸೇರಿ ಕಾನೂನುಬಾಹಿರ ಕೃತ್ಯವೆಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದ್ದು, ಸದ್ರಿ ಸಂದೇಶವನ್ನು ಪ್ರಸಾರ ಮಾಡಿದ “Sanjeeva Matandoor” ಎಂಬ ಫೇಸ್ ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ:102/2026, ಕಲಂ: 353(2),57,189 THE BHARATIYA NYAYA SANHITA (BNS), 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.

ಪ್ರತಿಯೊಬ್ಬರೂ ಪ್ರತಿಭಟನೆ ನಡೆಸುವ ಹಕ್ಕನ್ನು ಹೊಂದಿದ್ದು, ಪೊಲೀಸ್ ಇಲಾಖೆಯಿಂದ ಅನುಮತಿಯನ್ನು ನೀಡಲಾಗುವುದು. ಆದರೆ ಪ್ರತಿಭಟನೆಯ ದಿನಾಂಕ ಮತ್ತು ಸಮಯವನ್ನು ಸಮಾಜದ ಸ್ವಾಸ್ತ್ಯಕ್ಕೆ ದಕ್ಕೆಯಾಗುವಂತಹ ಯಾವುದೇ ಅನ್ಯ ಉದ್ದೇಶದಿಂದ ನಿಗದಿಪಡಿಸಿರುವುದು ಕಂಡುಬಂದಲ್ಲಿ, ಅಂತಹವರುಗಳ ವಿರುದ್ದ ಪೊಲೀಸ್ ಇಲಾಖೆಯು ಸೂಕ್ತ ಕಾನೂನು ಕ್ರಮ ಜರುಗಿಸಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ


