ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ಬಂಧನ
ಪುತ್ತೂರು: ಆ.23ರಂದು ಬೆಳಿಗ್ಗೆ, ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ ಟಿ ರವರಿಗೆ ಮಾಹಿತಿ ಬಂದ ಮೇರೆಗೆ, ಅವರು ಸಿಬ್ಬಂದಿಗಳೊಂದಿಗೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ಪಿಕ್ ಆಫ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಪಿಕ್ ಆಫ್ ವಾಹನ ಚಾಲಕನಾದ ಮಹಮ್ಮದ್ ಜಬ್ಬಾರ್ ಎಂಬಾತನಲ್ಲಿ ವಿಚಾರಿಸಲಾಗಿ, ಜಾನುವಾರುಗಳನ್ನು ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಖರೀದಿಸಿ ಯಾವುದೇ ಪರವಾನಿಗೆ ಇಲ್ಲದೇ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿರುತ್ತಾನೆ. ಜಾನುವಾರು ಸಹಿತವಾಗಿ ವಾಹನವನ್ನು ಹಾಗೂ ಆರೋಪಿಯನ್ನು ವಶಕ್ಕೆ ಪಡೆದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 101/2026, ಕಲಂ: 11(D) ಪ್ರಾಣಿ ಹಿಂಸಾ ಕಾಯ್ದೆ ಮತ್ತು ಕಲಂ: 4,5,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಕಲಂ: 66 R/w 192 (A) IMV Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


