ದರ್ಬೆ ಘಟನೆ: ಇತ್ತಂಡದ ಗಾಯಾಳುಗಳನ್ನು ಭೇಟಿ ಮಾಡಿದ ಶಾಸಕ ಅಶೋಕ್ ರೈ
ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಪುತ್ತೂರಿನ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಹಾಗೂ
ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಎರಡೂ ಕಡೆಯ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು


