ಕರಾವಳಿಕ್ರೈಂ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು



ಪುತ್ತೂರು: ಆ.23ರಂದು ರಾತ್ರಿ ವೇಳೆ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ಸಲುವಾಗಿ ಅದ್ದು ಪಡೀಲ್‌ ಎಂಬಾತನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ, ದಾರಿ ಮಧ್ಯೆ ಸಂತ್ರಸ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.


ಈ ಕುರಿತು ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/2026, ಕಲಂ 75 ಬಿಎನ್‌ಎಸ್ 2023 ಹಾಗೂ ಕಲಂ 8, 12 ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!