ಕರಾವಳಿ

ಪುತ್ತೂರು: ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ ದಂಡ ವಿಧಿಸಿದ ಪೊಲೀಸರು

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ  ಗ್ಲಾಸ್ ಗಳಿಗೆ ಸ್ಟಿಕ್ಕರ್ ಅಳವಡಿಸಿ, ವಾಹನದ ನೋಂದಣಿ ಸಂಖ್ಯೆ ಮರೆಮಾಚುವಂತೆ ಸ್ಟಿಕ್ಕರ್ ಅಳವಡಿಸುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ ಪುತ್ತೂರು ಸಂಚಾರ ಠಾಣಾ ಪೊಲೀಸರು ದಂಡ ವಿಧಿಸಿದ್ದಾರೆ.


ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ ಹರಿದಿನಗಳು ಹಾಗೂ ಯಾವುದೇ ಕಾರ್ಯಕ್ರಮದ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!